Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:7 - ಪರಿಶುದ್ದ ಬೈಬಲ್‌

7 ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:7
20 ತಿಳಿವುಗಳ ಹೋಲಿಕೆ  

ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.


ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.


ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.


ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.


ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.


ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.


ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.”


ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.


ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.


ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.


ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.


ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.


ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು