ಜ್ಞಾನೋಕ್ತಿಗಳು 11:10 - ಪರಿಶುದ್ದ ಬೈಬಲ್10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿ |
ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.