ಜ್ಞಾನೋಕ್ತಿಗಳು 11:17 - ಪರಿಶುದ್ದ ಬೈಬಲ್17 ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.