Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:16 - ಪರಿಶುದ್ದ ಬೈಬಲ್‌

16 ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:16
12 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು; ಆದರೆ ಜ್ಞಾನಿಯು ತನ್ನನ್ನು ಹತೋಟಿಯಲ್ಲಿಟ್ಟುಕೊಳ್ಳುವನು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.


ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.


ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.


ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.


ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು.


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.


ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು