Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:3 - ಪರಿಶುದ್ದ ಬೈಬಲ್‌

3 ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೋ ಸಮಾಧಾನದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುಷ್ಟತನದಿಂದ ಯಾವನೂ ಸ್ಥಿರತೆಯನ್ನು ಗಳಿಸಿಲ್ಲ; ಶಿಷ್ಟನ ಬೇರನ್ನು ಯಾರೂ ಕದಲಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನೂ ದುಷ್ಟತನದಿಂದ ಸ್ಥಿರನಾಗನು; ಶಿಷ್ಟನು ಯಾವಾಗಲೂ ದೃಢಮೂಲನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:3
13 ತಿಳಿವುಗಳ ಹೋಲಿಕೆ  

ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಕಳವು ಮಾಲುಗಳಲ್ಲಿ ದುಷ್ಟರಿಗೆ ಆಸೆ. ಒಳ್ಳೆಯವರಿಗಾದರೋ ತಮ್ಮಲ್ಲಿರುವುದನ್ನು ಬೇರೆಯವರಿಗೆ ಕೊಡಬೇಕೆಂಬ ಆಸೆ.


ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ.


ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.


ನೀತಿವಂತನು ಯಥಾರ್ಥನಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು