ಜ್ಞಾನೋಕ್ತಿಗಳು 12:5 - ಪರಿಶುದ್ದ ಬೈಬಲ್5 ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶಿಷ್ಟರ ಉದ್ದೇಶ ನ್ಯಾಯ; ದುಷ್ಟರ ಆಲೋಚನೆ ಮೋಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.