ಜ್ಞಾನೋಕ್ತಿಗಳು 12:6 - ಪರಿಶುದ್ದ ಬೈಬಲ್6 ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.