ಜ್ಞಾನೋಕ್ತಿಗಳು 13:10 - ಪರಿಶುದ್ದ ಬೈಬಲ್10 ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.