ಜ್ಞಾನೋಕ್ತಿಗಳು 13:13 - ಪರಿಶುದ್ದ ಬೈಬಲ್13 ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.