ಜ್ಞಾನೋಕ್ತಿಗಳು 13:15 - ಪರಿಶುದ್ದ ಬೈಬಲ್15 ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.