Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:23 - ಪರಿಶುದ್ದ ಬೈಬಲ್‌

23 ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಡವರಿಗೆ ಬಂಜರು ಭೂವಿುಯೂ ಬಹು ಬೆಳೆಯನ್ನೀಯುವದು; ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:23
12 ತಿಳಿವುಗಳ ಹೋಲಿಕೆ  

ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.


ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು.


ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.


ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.


ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು