ಜ್ಞಾನೋಕ್ತಿಗಳು 13:5 - ಪರಿಶುದ್ದ ಬೈಬಲ್5 ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.