ಜ್ಞಾನೋಕ್ತಿಗಳು 13:6 - ಪರಿಶುದ್ದ ಬೈಬಲ್6 ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. ಅಧ್ಯಾಯವನ್ನು ನೋಡಿ |
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.