ಜ್ಞಾನೋಕ್ತಿಗಳು 14:10 - ಪರಿಶುದ್ದ ಬೈಬಲ್10 ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ. ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.