ಜ್ಞಾನೋಕ್ತಿಗಳು 14:14 - ಪರಿಶುದ್ದ ಬೈಬಲ್14 ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.