Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:16 - ಪರಿಶುದ್ದ ಬೈಬಲ್‌

16 ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:16
27 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.


ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.


ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.


ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು