Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:17 - ಪರಿಶುದ್ದ ಬೈಬಲ್‌

17 ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:17
18 ತಿಳಿವುಗಳ ಹೋಲಿಕೆ  

ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.


ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.


ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.


ದುರಾಲೋಚನೆ ಮಾಡುವ ಹೃದಯ, ಕೇಡುಮಾಡಲು ಓಡುವ ಕಾಲು.


ಮೊರ್ದೆಕೈ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಕೇವಲ ಮೊರ್ದೆಕೈಯನ್ನು ಮಾತ್ರವೇ ಕೊಲ್ಲದೆ ಅಹಷ್ವೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಉಪಾಯವನ್ನು ಹೂಡಿದನು.


ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು.


ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು