ಜ್ಞಾನೋಕ್ತಿಗಳು 14:2 - ಪರಿಶುದ್ದ ಬೈಬಲ್2 ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.