Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:24 - ಪರಿಶುದ್ದ ಬೈಬಲ್‌

24 ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜ್ಞಾನಿಗಳ [ಜ್ಞಾನ] ಕೀರಿಟವೇ ಅವರ ಶ್ರೇಷ್ಠ ಸಂಪತ್ತು; ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:24
12 ತಿಳಿವುಗಳ ಹೋಲಿಕೆ  

“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.


ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.


ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು