ಜ್ಞಾನೋಕ್ತಿಗಳು 14:29 - ಪರಿಶುದ್ದ ಬೈಬಲ್29 ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.