Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:31 - ಪರಿಶುದ್ದ ಬೈಬಲ್‌

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:31
19 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ದೇವರು ನಮಗೆ ನೀಡಿರುವ ಆಜ್ಞೆಯಾಗಿದೆ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


“ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು.


ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


“ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು