Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:33 - ಪರಿಶುದ್ದ ಬೈಬಲ್‌

33 ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ವಿವೇಕಿಯ ಹೃದಯ ಜ್ಞಾನಾಶ್ರಯ; ಜ್ಞಾನಹೀನನ ಒಳಗುಟ್ಟು ರಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:33
10 ತಿಳಿವುಗಳ ಹೋಲಿಕೆ  

ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.


ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕಶೂನ್ಯವನ್ನು ಎಲ್ಲರಿಗೂ ಪ್ರಕಟಪಡಿಸುವನು.


ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು; ಆದರೆ ಜ್ಞಾನಿಯು ತನ್ನನ್ನು ಹತೋಟಿಯಲ್ಲಿಟ್ಟುಕೊಳ್ಳುವನು.


ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.


ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.


ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು