Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:34 - ಪರಿಶುದ್ದ ಬೈಬಲ್‌

34 ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:34
13 ತಿಳಿವುಗಳ ಹೋಲಿಕೆ  

ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.


ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು.


ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು