Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:4 - ಪರಿಶುದ್ದ ಬೈಬಲ್‌

4 ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:4
7 ತಿಳಿವುಗಳ ಹೋಲಿಕೆ  

ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.


ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ.


ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.


ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು