Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:5 - ಪರಿಶುದ್ದ ಬೈಬಲ್‌

5 ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:5
15 ತಿಳಿವುಗಳ ಹೋಲಿಕೆ  

ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.


ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.


“ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.


ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.


ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ.


ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು.


ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


“ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


“ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ,


ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.


ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು