ಜ್ಞಾನೋಕ್ತಿಗಳು 15:10 - ಪರಿಶುದ್ದ ಬೈಬಲ್10 ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.