Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:22 - ಪರಿಶುದ್ದ ಬೈಬಲ್‌

22 ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:22
8 ತಿಳಿವುಗಳ ಹೋಲಿಕೆ  

ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.


ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.


ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.


ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.


ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.


ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು