ಜ್ಞಾನೋಕ್ತಿಗಳು 15:27 - ಪರಿಶುದ್ದ ಬೈಬಲ್27 ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು. ಅಧ್ಯಾಯವನ್ನು ನೋಡಿ |
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.