ಜ್ಞಾನೋಕ್ತಿಗಳು 15:9 - ಪರಿಶುದ್ದ ಬೈಬಲ್9 ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿ |
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.