ಜ್ಞಾನೋಕ್ತಿಗಳು 16:10 - ಪರಿಶುದ್ದ ಬೈಬಲ್10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.