ಜ್ಞಾನೋಕ್ತಿಗಳು 16:14 - ಪರಿಶುದ್ದ ಬೈಬಲ್14 ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು. ಅಧ್ಯಾಯವನ್ನು ನೋಡಿ |
ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.