ಜ್ಞಾನೋಕ್ತಿಗಳು 16:19 - ಪರಿಶುದ್ದ ಬೈಬಲ್19 ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವದಕ್ಕಿಂತಲೂ ದೀನರ ಸಂಗಡ ದೈನ್ಯದಿಂದಿರುವದು ವಾಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’