ಜ್ಞಾನೋಕ್ತಿಗಳು 16:21 - ಪರಿಶುದ್ದ ಬೈಬಲ್21 ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.