Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:29 - ಪರಿಶುದ್ದ ಬೈಬಲ್‌

29 ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:29
13 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.


ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.


ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.


ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.


ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು.


ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.


ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.


ಕೆಡುಕನು ಜಗಳ ಎಬ್ಬಿಸುವನು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟುಮಾಡುವನು.


ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು