Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:31 - ಪರಿಶುದ್ದ ಬೈಬಲ್‌

31 ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:31
16 ತಿಳಿವುಗಳ ಹೋಲಿಕೆ  

ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ.


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.


ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.


ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.


ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು