ಜ್ಞಾನೋಕ್ತಿಗಳು 16:33 - ಪರಿಶುದ್ದ ಬೈಬಲ್33 ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ. ಅಧ್ಯಾಯವನ್ನು ನೋಡಿ |
“‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.