Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:6 - ಪರಿಶುದ್ದ ಬೈಬಲ್‌

6 ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:6
27 ತಿಳಿವುಗಳ ಹೋಲಿಕೆ  

ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.


ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


“ಕನಸಿನ ಅರ್ಥವು ಹೀಗಿದೆ: ಅರಸನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ಅರಸನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು