Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:1 - ಪರಿಶುದ್ದ ಬೈಬಲ್‌

1 ಜಗಳದ ಮನೆಯಲ್ಲಿ ಮೃಷ್ಠಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣರೊಟ್ಟಿಯನ್ನು ತಿನ್ನುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ ಸಮಾಧಾನದ ಒಣತುತ್ತೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:1
8 ತಿಳಿವುಗಳ ಹೋಲಿಕೆ  

ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ.


ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು.


ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು.


ಮನೆಯೊಳಗೆ ವಾದಿಸುವ ಹೆಂಡತಿಯ ಜೊತೆಯಲ್ಲಿ ವಾಸಿಸುವುದಕ್ಕಿಂತ ಮನೆಯ ಮೇಲ್ಛಾವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.


“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.


ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸ್ತಿಯಲ್ಲಿ ಪಾಲು ಹೊಂದುವನು.


ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.


ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು