Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:14 - ಪರಿಶುದ್ದ ಬೈಬಲ್‌

14 ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:14
28 ತಿಳಿವುಗಳ ಹೋಲಿಕೆ  

ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು.


ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.


ಜಗಳದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಚ್ಚಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.


ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು