Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:20 - ಪರಿಶುದ್ದ ಬೈಬಲ್‌

20 ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:20
11 ತಿಳಿವುಗಳ ಹೋಲಿಕೆ  

ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ.


ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.


ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.


ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೋ ಶತ್ರುವಾಗಿರುವೆ.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು