Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:22 - ಪರಿಶುದ್ದ ಬೈಬಲ್‌

22 ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹರ್ಷಹೃದಯವು ಒಳ್ಳೇ ಔಷಧ, ಕುಗ್ಗಿದ ಮನದಿಂದ ಒಣಮೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:22
12 ತಿಳಿವುಗಳ ಹೋಲಿಕೆ  

ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.


ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.


ಅಸ್ವಸ್ಥನನ್ನು ಅವನ ಮನಸ್ಸು ಜೀವಂತವಾಗಿಡಬಲ್ಲದು. ಆದರೆ ಮುರಿದ ಆತ್ಮವನ್ನು ಯಾರು ಸಹಿಸಿಕೊಳ್ಳಬಲ್ಲರು?


ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.


ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು