Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:23 - ಪರಿಶುದ್ದ ಬೈಬಲ್‌

23 ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:23
16 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.


“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನಿನ್ನ ಮೇಲೆ ಕೋಪಗೊಂಡಿರುವವನಿಗೆ ಒಂದು ಉಡುಗೊರೆಯನ್ನು ಗುಟ್ಟಾಗಿ ಕೊಡು. ಗುಟ್ಟಾಗಿ ಕೊಟ್ಟ ಉಡುಗೊರೆಯು ಮಹಾ ಕೋಪವನ್ನೂ ಅಡಗಿಸಬಲ್ಲದು.


ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.


ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು