Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:27 - ಪರಿಶುದ್ದ ಬೈಬಲ್‌

27 ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಿಡಿದು ಮಾತಾಡುವವನು ಜ್ಞಾನಿ. ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:27
8 ತಿಳಿವುಗಳ ಹೋಲಿಕೆ  

ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.


ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು