Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:4 - ಪರಿಶುದ್ದ ಬೈಬಲ್‌

4 ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು; ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:4
10 ತಿಳಿವುಗಳ ಹೋಲಿಕೆ  

ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು