ಜ್ಞಾನೋಕ್ತಿಗಳು 17:6 - ಪರಿಶುದ್ದ ಬೈಬಲ್6 ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.