Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:10 - ಪರಿಶುದ್ದ ಬೈಬಲ್‌

10 ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:10
29 ತಿಳಿವುಗಳ ಹೋಲಿಕೆ  

ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.


ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.


ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.


“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.


ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.


ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು