Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:18 - ಪರಿಶುದ್ದ ಬೈಬಲ್‌

18 ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:18
10 ತಿಳಿವುಗಳ ಹೋಲಿಕೆ  

ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.


ಸೌಲನು, “ಪಾಪ ಮಾಡಿದವನು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೀಟುಹಾಕಿರಿ” ಎಂದು ಹೇಳಿದನು. ಚೀಟು ಯೋನಾತಾನನಿಗೆ ಬಂದಿತು.


ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ. ಆದರೆ ಪ್ರತಿವಾದಿ ಎದ್ದಮೇಲೆ ಅವನ ನಿಜಪರೀಕ್ಷೆ ಆಗುವುದು.


ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.


ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು