Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:20 - ಪರಿಶುದ್ದ ಬೈಬಲ್‌

20 ಒಬ್ಬನು ತಾನು ಹೇಳಿದ ಒಳ್ಳೆಯದಕ್ಕೇ ಆಗಲಿ ಕೆಟ್ಟದ್ದಕ್ಕೇ ಆಗಲಿ ಪ್ರತಿಫಲವನ್ನು ಪಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಾಯಿ ಬಿತ್ತಿದ ಬೆಳೆಯಿಂದ ಮನುಷ್ಯ ಹೊಟ್ಟೆ ತುಂಬುವನು; ತುಟಿಗಳು ಕೊಟ್ಟ ಫಲದಿಂದ ತಿಂದು ತೇಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯನು ತನ್ನ ಬಾಯ ಬೆಳೆಯನ್ನು ಹೊಟ್ಟೆತುಂಬಾ ಉಣ್ಣುವನು; ತನ್ನ ತುಟಿಗಳ ಫಲವನ್ನು ಸಾಕಾದಷ್ಟು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:20
7 ತಿಳಿವುಗಳ ಹೋಲಿಕೆ  

ಒಳ್ಳೆಯವರು ತಮ್ಮ ಮಾತುಗಳಿಗೆ ಪ್ರತಿಫಲ ಹೊಂದುವರು. ಕೆಡುಕರು ಯಾವಾಗಲೂ ಕೆಟ್ಟದ್ದನ್ನು ಮಾಡಬಯಸುತ್ತಾರೆ.


ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು.


ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ.


ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.


ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು