ಜ್ಞಾನೋಕ್ತಿಗಳು 18:5 - ಪರಿಶುದ್ದ ಬೈಬಲ್5 ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.