ಜ್ಞಾನೋಕ್ತಿಗಳು 19:12 - ಪರಿಶುದ್ದ ಬೈಬಲ್12 ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. ಅಧ್ಯಾಯವನ್ನು ನೋಡಿ |
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.